ಚಳ್ಳಕೆರೆ ಡಿ.29 ರಾಷ್ಟ್ರಕವಿ ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು. ಅವರ ಕಾವ್ಯಗಳಲ್ಲಿರುವ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇದರಿಂದ ಸಮಾಜದಲ್ಲಿ ಉತ್ತಮ ನಾಗರಿಕರಾಗಲು ಸಹಾಯವಾಗಲಿದೆ’ ಎಂದು ತಹಶೀಲ್ದಾರ್ ರೇಹಾನ್ ಪಾಷ ಹೇಳಿದರು.
ನಗರದ ತಾಲೂಕು ಕಚೇರಿಯಲ್ಲಿ ಭಾನುವಾರ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿವತಿಯಿಂದ ಆಯೋಜಿಸಿದ್ದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮಾನವ ತನ್ನ ಮನಸನ್ನು ವಿಶ್ವದಷ್ಟು ವಿಶಾಲವಾಗಿ ಇಟ್ಟುಕೊಳ್ಳಬೇಕು. ಹೃದಯವಂತಿಕೆ ಸಜ್ಜನಿಕೆ, ಅಭಿಮಾನ, ಪ್ರೀತಿ, ಸಹನೆ ಹಾಗೂ ಕರುಣೆ ಎಲ್ಲವೂ ಮುಖ್ಯ ಎನ್ನುವುದನ್ನು ತಮ್ಮ ಕಾವ್ಯಗಳ ಮೂಲಕ ಕುವೆಂಪು ಅವರು ಜಗತ್ತಿಗೆ ಪರಿಚಯಿಸಿದರು’ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.






About The Author
Discover more from JANADHWANI NEWS
Subscribe to get the latest posts sent to your email.