ನಾಗತಿಹಳ್ಳಿ ಮಂಜುನಾಥ್
ಹೊಸದುರ್ಗ:
ಯಾವುದೇ ಕಾರ್ಯದಲ್ಲಿ ಯಶಸ್ಸು ಸಾಧಿಸಲು ಶ್ರದ್ಧೆ ಅತೀ ಮುಖ್ಯ. ಅದರಂತೆ ಮಕ್ಕಳಲ್ಲಿ ಶ್ರದ್ಧೆ ಇದ್ದರೆ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಶಾಂತಪ್ಪ ಅಭಿಪ್ರಾಯಪಟ್ಟರು.
ಪಟ್ಟಣದ ವಾಣಿವಿಲಾಸ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ 48ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಓದು ಹಾಗೂ ಕ್ರೀಡೆಗಳಿಗೆ ಸಮಯ ಮೀಸಲಿಡಬೇಕು. ಓದಿನ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೂ ಸಮಾನ ಒತ್ತು ನೀಡಬೇಕು ಎಂದರು.
ಇನ್ನೂ ಮೂರು ತಿಂಗಳಲ್ಲಿ ಪರೀಕ್ಷೆಗಳು ಸಮೀಪಿಸುತ್ತಿರುವುದರಿಂದ ಶ್ರದ್ಧೆಯಿಂದ ಅಧ್ಯಯನ ಮಾಡಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸಬೇಕು ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪೋಷಕರು ಧಾರಾವಾಹಿ ವೀಕ್ಷಣೆಯನ್ನು ಕಡಿಮೆ ಮಾಡಿ ಮಕ್ಕಳ ಭವಿಷ್ಯ ಹಾಗೂ ಪ್ರಗತಿಗೆ ಹೆಚ್ಚಿನ ಗಮನ ನೀಡಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲಾ ಅಧ್ಯಕ್ಷ ಕೆ. ರಮೇಶ್ ಸಿಂಗ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಶ್ರೀನಿವಾಸ್, ಶಿಕ್ಷಣ ಸಂಯೋಜಕ ಶಶಿಧರ್, ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಉಪಾಧ್ಯಕ್ಷ ನಾಗತಿಹಳ್ಳಿಮಂಜುನಾಥ್ ಉಪಸ್ಥಿತರಿದ್ದರು.
ಪೋಷಕ ಪ್ರತಿನಿಧಿ ಅನ್ವರ್, ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕ ಹೆಚ್.ಆರ್. ರಂಗಸ್ವಾಮಿ, ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಚಂದ್ರಮ್ಮ ಸೇರಿದಂತೆ ಹಲವರು ಭಾಗವಹಿಸಿದ್ದರು. ಕಾರ್ಯಕ್ರಮದ ನಂತರ ಶಾಲಾ ಮಕ್ಕಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಸಭಿಕರ ಮನಸೆಳೆದವು.
About The Author
Discover more from JANADHWANI NEWS
Subscribe to get the latest posts sent to your email.