January 30, 2026
1738330154058.jpg


ಚಿತ್ರದುರ್ಗಜ.31:
ಆರೋಗ್ಯ ರಕ್ಷಣೆ ಎಲ್ಲರ ಆದ್ಯ ಕರ್ತವ್ಯವಾಗಿದ್ದು, ನಮ್ಮ ನಿತ್ಯ ಕೆಲಸಗಳ ಜೊತೆಗೆ ಆರೋಗ್ಯದ ಕಡೆ ಹೆಚ್ಚಿನ ಗಮನವನ್ನು ಹರಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರೋಣ ವಾಸುದೇವ ಹೇಳಿದರು.
ನಗದ ವಕೀಲರ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ವಕೀಲರ ಸಂಘ ಸಹಯೋಗದಲ್ಲಿ ಆಯುಷ್ ಇಲಾಖೆ ವತಿಯಿಂದ ಉಚಿತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರದಲ್ಲಿ ಅವರು ಮಾತನಾಡಿದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ ನಾಗಸಮುದ್ರ ಮಾತನಾಡಿ, ಆಯುಷ್ ಇಲಾಖೆ ವತಿಯಿಂದ ಇದು ಎರಡನೇ ಶಿಬಿರವಾಗಿದ್ದು, ಈ ಹಿಂದಿನ ಶಿಬಿರದಲ್ಲಿ ಸುಮಾರು 390 ಜನರು ಪ್ರಯೋಜನವನ್ನು ಪಡೆದಿದ್ದರು. ಈ ಶಿಬಿರವನ್ನು ಸಹ ಹೆಚ್ಚಿನ ಪ್ರಮಾಣದಲ್ಲಿ ಪ್ರಯೋಜನ ಪಡೆದು ಯಶಸ್ವಿಗೊಳಿಸಬೇಕೆಂದು ಕೋರಿದರು.
ವಕೀಲರ ಸಂಘದ ಅಧ್ಯಕ್ಷ ವೈ. ತಿಪ್ಪೇಸ್ವಾಮಿ ಮಾತನಾಡಿ, ಇಂದಿನ ಒತ್ತಡದ ಬದುಕಿಗೆ ಹಾಗೂ ಜೀವನಶೈಲಿ ಜನ್ಯ ವ್ಯಾಧಿಗಳಿಗೆ ಆಯುಷ್ ಚಿಕಿತ್ಸಾ ಪದ್ಧತಿಯು ಉತ್ತಮ ವೈದ್ಯ ಪದ್ಧತಿಯಾಗಿದ್ದು. ನಾವೆಲ್ಲರೂ ಆಯುಷ್ ಸಿದ್ಧಾಂತಗಳನ್ನು ಅಳವಡಿಸಿಕೊಳ್ಳಬೇಕಿದೆ ಎಂದು ತಿಳಿಸಿದರು.
ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಗಂಗಾಧರ್ ನಿರೂಪಿಸಿದರು. ಆಯುಷ್ ವೈದ್ಯಾಧಿಕಾರಿ ಡಾ. ಶಿವಕುಮಾರ್ ಪ್ರಾಸ್ತಾವಿಕ ನುಡಿಯಲ್ಲಿ ಈ ಶಿಬಿರದಲ್ಲಿ ದೊರೆಯುವ ಸೇವೆಗಳನ್ನು ವಿವರಿಸಿದರು. ಡಾ. ನಾರದಮುನಿ ಅವರು ಅತಿಥಿಗಳಿಗೆ ಔಷಧೀಯ ಸಸ್ಯ ಗಳನ್ನು ನೀಡಿ ಸ್ವಾಗತಿಸಿದರು. ಡಾ. ನಾಗರಾಜ್ ನಾಯ್ಕ್ ಅವರು ವಂದನಾರ್ಪಣೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಆಯುಷ್ ವೈದ್ಯಾಧಿಕಾರಿಗಳು, ಜಿಲ್ಲಾ ಆಯುಷ್ ಘಟಕದ ವೈದ್ಯರು ಹಾಗೂ ಸಿಬ್ಬಂದಿಯವರು, ಆರೋಗ್ಯ ಹಾಗು ಕುಟುಂಬ ಕಲ್ಯಾಣ ಇಲಾಖೆಯ ಸಮುದಾಯ ಸಮುದಾಯ ಆರೋಗ್ಯಾಧಿಕಾರಿಗಳು ಇತರ ಸಿಬ್ಬಂದಿ ಹಾಜರಿದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading