ಹಿರಿಯೂರು :
ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಸರ್ಕಾರವಾಗಿದ್ದು, ರಾಜ್ಯದ ಸಮಗ್ರ ಅಭಿವೃದ್ಧಿ ನಮ್ಮ ಕಾಂಗ್ರೆಸ್ ಸರ್ಕಾರದ ಧ್ಯೇಯವಾಗಿದೆ, ಈ ನಿಟ್ಟಿನಲ್ಲಿ ಮಹಿಳೆಯರ ಶ್ರೇಯೋಭಿವೃದ್ಧಿಗೆ ಒತ್ತು ನೀಡುವ ಜೊತೆಗೆ ಶಿಕ್ಷಣಕ್ಷೇತ್ರ, ಆರೋಗ್ಯಕ್ಷೇತ್ರಕ್ಕೂ ಒತ್ತು ನೀಡಿದ್ದು, ಗ್ರಾಮೀಣ ಪ್ರದೇಶದ ಸಿಸಿ ರಸ್ತೆ ಅಭಿವೃದ್ಧಿಗೂ ಹೆಚ್ಚು ಗಮನಹರಿಸಲಾಗುತ್ತಿದೆ ಎಂಬುದಾಗಿ ಜಿಲ್ಲಾ ಉಸ್ತವಾರಿ ಸಚಿವರಾದ ಡಿ.ಸುಧಾಕರ್ ಹೇಳಿದರು.
ತಾಲ್ಲೂಕಿನ ಕಂದಿಕೆರೆ ಗ್ರಾಮದಲ್ಲಿ ಸಿಸಿ ರಸ್ತೆ ಅಭಿವೃದ್ದಿ ಕಾಮಗಾರಿ ಹಾಗೂ ಮಾರಮ್ಮ ದೇವಸ್ಥಾನ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ, ನಂತರ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ಗ್ರಾಮದ ರಂಗನಾಥ ಸ್ವಾಮಿಯ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಶಶಿಕಲಾಸುರೇಶ್ ಬಾಬು, ಯರಬಳ್ಳಿ ಗ್ರಾಮಪಂಚಾಯತ್ ಅದ್ಯಕ್ಷರಾದ ಎಸ್.ತಿಪ್ಪೇಸ್ವಾಮಿ, ಜಿಲ್ಲಾ ಯುವಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಂದಿಕೆರೆಅವಿನಾಶ್, ಸ್ಥಳೀಯಮುಖಂಡರಾದ ಕಂದಿಕೆರೆ ಜಗದೀಶ್, ಎಲ್.ತಿಪ್ಪೇಸ್ವಾಮಿ, ರಂಗನಾಥ್, ಜಯಕುಮಾರ್, ರಘುನಾಥ್, ಶಂಕರಪ್ಪ, ಪಿ.ಟಿ.ರಾಜು, ಜೆ.ಕೆ.ತಿಪ್ಪೇಸ್ವಾಮಿ, ಗೋವಿಂದರಾಜು, ತಿಪ್ಪೇಶ್, ವಸಂತ, ದ್ಯಾಮಣ್ಣ, ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.
About The Author
Discover more from JANADHWANI NEWS
Subscribe to get the latest posts sent to your email.