ಚಳ್ಳಕೆರೆ, ಮಾ.31: ನಗರದಾದ್ಯಂತ ಜನಗಣತಿ 2027 ಕಾರ್ಯವು ಏಪ್ರಿಲ್ 1ರಿಂದ ಆರಂಭವಾಗಲಿದ್ದು, ಏಪ್ರಿಲ್ 15ರವರೆಗೆ ಸ್ವಯಂ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತೆ ಡಾ. ನಾಗವೇಣಿ ತಿಳಿಸಿದ್ದಾರೆ.
ನಗರಸಭೆ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ www.sc.cencess.gov.in� ವೆಬ್‌ಸೈಟ್‌ಗೆ ಲಾಗಿನ್ ಆಗಿ ಅಗತ್ಯ ಮಾಹಿತಿಗಳನ್ನು ಸ್ವಯಂವಾಗಿ ಭರ್ತಿ ಮಾಡಬಹುದಾಗಿದೆ ಎಂದು ತಿಳಿಸಿದರು.
ಜನಗಣತಿ ದೇಶದ ಸಮಗ್ರ ಅಭಿವೃದ್ಧಿಗೆ ಅತ್ಯಂತ ಪ್ರಮುಖವಾಗಿದ್ದು, ಸರ್ಕಾರದ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸಲು ಇದು ಸಹಕಾರಿ ಆಗುತ್ತದೆ. ಈ ಹಿನ್ನೆಲೆಯಲ್ಲಿ ನಗರಸಭೆಯಿಂದ ಈಗಾಗಲೇ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಮನೆಮನೆಗೆ ಭೇಟಿ ನೀಡಿ ನಾಗರಿಕರಿಂದ ಮಾಹಿತಿ ಸಂಗ್ರಹಿಸಿ ಆನ್‌ಲೈನ್‌ನಲ್ಲಿ ದಾಖಲಿಸುವ ವ್ಯವಸ್ಥೆಯೂ ಮಾಡಲಾಗಿದೆ ಎಂದು ವಿವರಿಸಿದರು.
ಯಾವುದೇ ವದಂತಿಗಳಿಗೆ ಕಿವಿಗೊಡದೆ, ಸಾರ್ವಜನಿಕರು ಯಾವುದೇ ಆತಂಕವಿಲ್ಲದೆ ತಮ್ಮ ನಿಖರ ಮಾಹಿತಿಯನ್ನು ನೀಡಬೇಕು. ಜನಗಣತಿ ಯಶಸ್ವಿಯಾಗಲು ಪ್ರತಿಯೊಬ್ಬ ನಾಗರಿಕರ ಸಹಕಾರ ಅಗತ್ಯವಾಗಿದ್ದು, ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.
About The Author
Discover more from JANADHWANI NEWS
Subscribe to get the latest posts sent to your email.