ನಾಯಕನಹಟ್ಟಿ-: ಗ್ರಾಮೀಣ ಪ್ರದೇಶದ ಬಡ ಜನರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆ ಬಡವರ ಪಾಲಿಗೆ ಸಂಜೀವಿನಿ ಆಗಿದೆ ಎಂದು ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಕರೆ ನೀಡಿದರು.

ಭಾನುವಾರ ಪಟ್ಟಣ ಪಂಚಾಯತಿ ವ್ಯಾಪ್ತಿಯ ಜಾಗನೂರಹಟ್ಟಿ ಗ್ರಾಮದ ಕಾರ್ಯಕ್ಷೇತ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ಒಕ್ಕೂಟದ ಸಭೆಯಲ್ಲಿ ಮಾತನಾಡಿದರು ಈ ಪುಣ್ಯಕ್ಷೇತ್ರದಲ್ಲಿ ಕಳೆದ 14 ವರ್ಷದಿಂದ ಸಮಾಜದ ಕಟ್ಟ ಕಡೆಯ ಜನರಿಗೆ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಶೈಕ್ಷಣಿಕವಾಗಿ ಸಬಲೀಕರಣ ಆಗದವರಿಗೆ ಸಮಾಜದ ಮುಖ್ಯ ವಾಹಿನಿಗೆ ತರಬೇಕು ಬಡವರು ಸಾವಲಂಬಿ ಜೀವನ ಕಟ್ಟಿಕೊಳ್ಳಲು ಕೃಷಿ ಹೈನುಗಾರಿಕೆ ಸಹ ಉದ್ಯೋಗ ಹೀಗೆ ಅನೇಕ ಯೋಜನೆಗಳ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳ ಸಹಕಾರ ನೀಡುತ್ತಾ ಬಂದಿದೆ ಬಡವರು ತಮ್ಮ ಉತ್ತಮ ಬದುಕು ಕಟ್ಟಿಕೊಳ್ಳಲು ಶ್ರೀ ಕ್ಷೇತ್ರ ಸಂಜೀವಿನಿಯಾಗಿದೆ ಎಂದರು.
ನಾಯಕನಹಟ್ಟಿ ವಲಯ ಮೇಲ್ವಿಚಾರಕಿ ಶ್ರೀಮತಿ ಆರ್ ಎನ್ ಶಶಿಕಲಾ,
ಒಕ್ಕೂಟದ ಅಧ್ಯಕ್ಷೆ. ಮಂಜುಳಾ, ಉಪಾಧ್ಯಕ್ಷೆ ಪುಷ್ಪಲತಾ, ಕಾರ್ಯದರ್ಶಿ ಕವಿತಾ, ಜೊತೆ ಕಾರ್ಯದರ್ಶಿ ಸುಜಾತ, ಕೋಶಾಧಿಕಾರಿ ಮಮತಾ, ಸೇವಾ ಪ್ರತಿನಿಧಿ ಮಹಾಂತಮ್ಮ, ಸೇರಿದಂತೆ ಒಕ್ಕೂಟದ ಪದಾಧಿಕಾರಿಗಳು ಸರ್ವ ಸದಸ್ಯರು
ಇದ್ದರು
About The Author
Discover more from JANADHWANI NEWS
Subscribe to get the latest posts sent to your email.