
ಹಿರಿಯೂರು:
ತಾಲ್ಲೂಕಿನ ಬಬ್ಬೂರು ಫಾರಂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆಗಸ್ಟ್ 1ರಂದು ಬೆಳಗ್ಗೆ 10ಕ್ಕೆ ಜಿಲ್ಲೆಯ ರೈತರಿಗೆ ಬಿ.ಇ.ಇ. ಸ್ಟಾರ್ ಲೇಬಲ್ ವುಳ್ಳ ಇಂಧನ ದಕ್ಷ ಪಂಪ್ ಸೆಟ್ ಬಳಕೆ ಮತ್ತು ಜಲ ಸಂರಕ್ಷಣೆ ಜಾಗೃತಿ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರರಾದ ಆರ್.ರಜನೀಕಾಂತ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಈ ತರಬೇತಿ ಕಾರ್ಯಕ್ರಮವನ್ನು ಬ್ಯೂರೋ ಆಫ್ ಎನರ್ಜಿ ಎಫಿಷಿಎನ್ಸಿ (ಬಿ.ಇ.ಇ) ಹಾಗೂ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ದಿಾ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ಅವರು ಹೇಳಿದರು.
ಈ ತರಬೇತಿ ಕಾರ್ಯಕ್ರಮದಲ್ಲಿ ತೋಟಗಾರಿಕೆ ಮಹಾವಿದ್ಯಾಲಯದ ಡಾ. ರಾಜಶೇಖರ್ ಬಾರ್ಕೆರ ಹಾಗೂ ಅಂತರ್ಜಲ ತಜ್ಞ ಡಾ.ಎನ್. ದೇವರಾಜರೆಡ್ಡಿ, ನೇಟಫಿಮ್ ಸಂಸ್ಥೆಯ ಬೇಸಾಯ ಶಾಸ್ತ್ರಜ್ಞ ಅಂಜಿನಪ್ಪ ಹಾಗೂ ಸೆಲ್ಕೊ ಸಂಸ್ಥೆ ಸಂಸ್ಥಾಪಕರಾದ ಮಂಜುನಾಥ ಭಾಗವತ್ ಅವರು ಸೂರ್ಯಘರ್ ಯೋಜನೆ ಕುರಿತು ಅವರು ವಿಷಯ ಮಂಡಿಸುವರು.ಆದ್ದರಿಂದ ಆಸಕ್ತ 80 ಜನ ರೈತರು ತರಬೇತಿಯಲ್ಲಿ ಭಾಗವಹಿಸಲು ಅವಕಾಶವಿದೆ ಎಂಬುದಾಗಿ ಹೇಳಿದರು.
About The Author
Discover more from JANADHWANI NEWS
Subscribe to get the latest posts sent to your email.