ಹಿರಿಯೂರು:
ರೈತ ಉತ್ಪಾದಕ ಸಂಸ್ಥೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ಮೂಲಕ ಕೃಷಿ ಪರಿಕರಗಳನ್ನು ರೈತರಿಗೆ ಸಕಾಲದಲ್ಲಿ ತಲುಪಸಿದರೆ ಸಮಯದ ಉಳಿತಾಯ ಮತ್ತು ಸಾಗಾಣಿಕೆ ವೆಚ್ಚ ಕಡಿಮೆಯಾಗುತ್ತದೆ ಎಂಬುದಾಗಿ ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕಿ ಕವಿತಾ ಅವರು ಹೇಳಿದರು.
ತಾಲ್ಲೂಕಿನ ಬಬ್ಬೂರು ಫಾರಂನಲ್ಲಿರುವ ಜಿಲ್ಲಾ ಕೃಷಿ ಕೇಂದ್ರ ತರಬೇತಿ ಕೇಂದ್ರದಲ್ಲಿ ರೈತ ಉತ್ಪಾದಕರ ಸಂಸ್ಥೆಗಳ ಅಧ್ಯಕ್ಷರು, ಸಿ.ಇ.ಒ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರಿಗೆ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಸಾಮರ್ಥ್ಯಅಭಿವೃದ್ಧಿ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರೈತ ಉತ್ಪಾದಕ ಸಂಸ್ಥೆಗಳು, ತೋಟಗಾರಿಕೆ, ನಬಾರ್ಡ್, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಜಲಾನಯನ ಅಭಿವೃದ್ಧಿ, ರಿವಾರ್ಡ್ ಯೋಜನೆಗಳಡಿ ಸಿಗುವ ಸೌಲಭ್ಯಗಳನ್ನು ರೈತರಿಗೆ ತಲುಪಿಸುವ ಕೆಲಸ ಮಾಡಬೇಕು ಎಂಬುದಾಗಿ ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಂಟಿ ಕೃಷಿ ನಿರ್ದೇಶಕರಾದ ಬಿ.ಮಂಜುನಾಥ್ ರವರು ಮಾತನಾಡಿ, ಗುಣಮಟ್ಟದ ಕೃಷಿ ಪರಿಕರಗಳ ಪೂರೈಕೆ, ಆಹಾರ ಬೆಳೆಗಳಿಗೆ ವ್ಯವಸ್ಥಿತ ಮಾರುಕಟ್ಟೆ ಕಲ್ಪಿಸಿಸುವುದು , ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ, ವಿಷಮುಕ್ತ ಆಹಾರ ಉತ್ಪಾದನೆಗೆ ಸಹಕಾರ ನೀಡುವ ಮೂಲಕ ರೈತಸ್ನೇಹಿಯಾಗಿ ಕೆಲಸ ಮಾಡಬೇಕು ಎಂಬುದಾಗಿ ಹೇಳಿದರು.
ವಿಜ್ಞಾನ ಕೇಂದ್ರದ ಕೀಟಶಾಸ್ತ್ರಜ್ಞರಾದ ಓಂಕಾರಪ್ಪರವರು ಮಾತನಾಡಿ, ನವಂಬರ್ 9ರಂದು ಬಬ್ಬೂರು ಫಾರಂನಲ್ಲಿ ಕೃಷಿ ಮೇಳ ನಡೆಯಲಿದ್ದು, ರೈತ ಉತ್ಪಾದಕ ಸಂಸ್ಥೆಗಳು ತಮ್ಮ ಎಲ್ಲಾ ಸದಸ್ಯರೊಂದಿಗೆ ಮೇಳಕ್ಕೆ ಬಂದು ಕೃಷಿ ವಸ್ತು ಪ್ರದರ್ಶನ ಮತ್ತು ತಾಂತ್ರಿಕ ಕಾರ್ಯಾಗಾರದ ಪ್ರಯೋಜನ ಪಡೆಯಬೇಕು. ರೈತರ ಅಭಿವೃದ್ಧಿಗೆ ಸೇವಾಮನೋಭಾವ ಹಾಗೂ ಬದ್ಧತೆಯಿಂದ ಕೆಲಸ ಮಾಡಬೇಕು ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ಚಳ್ಳಕೆರೆ ಉಪವಿಭಾಗದ ಉಪ ಕೃಷಿ ನಿರ್ದೇಶಕ ಬಿ.ಎನ್. ಪ್ರಭಾಕರ್, ಕೆ.ಎಸ್.ಶಿವಕುಮಾರ್, ಸಹಾಯಕ ಕೃಷಿ ನಿರ್ದೇಶಕ ಸಂಕಳ ಮಲ್ಲನಗೌಡ(ಜಾರಿದಳ), ಜಿಲ್ಲಾ ಸಂಪನ್ಮೂಲ ವ್ಯಕ್ತಿ ಜಿ.ಪಿ. ಮೋಹನ್ ಕುಮಾರ್, ಇಕಾವು ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ತಿಪ್ಪೇಸ್ವಾಮಿ, ತುರುವನೂರಿನ ತಿಪ್ಪೇರುದ್ರಸ್ವಾಮಿ, ಚೆನ್ನವೀರಸ್ವಾಮಿ, ಕೊಂಡ್ಲಹಳ್ಳಿಯ ವಿಜಯಕುಮಾರ್ ಇವರುಗಳು ವಿವಿಧ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.


About The Author
Discover more from JANADHWANI NEWS
Subscribe to get the latest posts sent to your email.