March 16, 2026
IMG-20241231-WA0076.jpg

ವರದಿ: ಕೆ.ಟಿ.ಮೋಹನ್ ಕುಮಾರ್

ಸಾಲಿಗ್ರಾಮ (ಮೈಸೂರು ಜಿಲ್ಲೆ ): ಮದ್ಯಪಾನಕ್ಕೆ ದಾಸರಾಗುವವರು ಕುಟುಂಬದವರ ಜೊತೆಗೆ ಸರ್ವರ ಪ್ರೀತಿಯನ್ನು ಕಳೆದುಕೊಳ್ಳುತ್ತಾರೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಬಿ.ಜಯರಾಮ ನೆಲ್ಲಿತ್ತಾಯ ಹೇಳಿದರು.

ಅವರು ಮೈಸೂರು ಜಿಲ್ಲೆಯ ಸಾಲಿಗ್ರಾಮ ಪಟ್ಟಣದ ಬಾಹುಬಲಿ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ತಾಲೂಕು ಮಧ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಯಾವುದೋ ಒಂದು ಕಾರಣದಿಂದ ಆರಂಭವಾಗುವ ದುಶ್ಚಟಗಳು ದಿನೇ ದಿನೇ ಹೆಚ್ಚಾಗುವ ಮೂಲಕ ಅವುಗಳಿಗೆ ದಾಸರಾಗುವ ಜನರೇ ಪ್ರಸ್ತುತ ದಿನಗಳಲ್ಲಿ ಹೆಚ್ಚಿದ್ದಾರೆ. ಈ ವರ್ಗದ ಜನರು ಅದೇ ಕೆಲಸ ಮಾಡುವವರ ಗುಂಪಿಗೆ ಹೆಚ್ಚು ಸೇರುವುದರಿಂದ ಹೆಚ್ಚು ಹೆಚ್ಚು ದುಶ್ಚಟಗಳಿಗೆ ಬಲಿಯಾಗುತ್ತಾರೆ. ಇದರಿಂದ ತಮ್ಮ ಕುಟುಂಬದೊಂದಿಗೆ ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿರುವುದು ಎಲ್ಲೆಡೆ ಕಂಡುಬರುತ್ತಿದೆ. ಇಂತಹ ದುಶ್ಚಟಗಳಿಗೆ ಬಲಿಯಾಗುವವರನ್ನು ಜಾಗೃತಿಗೊಳಿಸಿ ಅದನ್ನು ತ್ಯಜಿಸುವ ಕೆಲಸವನ್ನು ಮಾಡಿಸುವುದರಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ನಡೆಯುತ್ತಿರುವ ಮಧ್ಯವರ್ಜನ ಶಿವರಗಳು ಪ್ರಮುಖ ಪಾತ್ರ ವಹಿಸುತ್ತೇವೆಂದರು.

ವಿವಿಧ ದುಶ್ಚಟಗಳಿಗೆ ದಾಸರಾಗುವುದನ್ನು ಬಿಟ್ಟು ಕುಟುಂಬದಲ್ಲಿ ಸಂತೋಷವಾಗಿದ್ದುಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ತಮ್ಮ ಜೀವನವನ್ನು ನಡೆಸುವ ಮೂಲಕ ನವಜೀವನ ನಡೆಸಬೇಕೆಂದು ಕರೆ ನೀಡಿದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಹಂದನಹಳ್ಳಿ ಸೋಮಶೇಖರ್ ಮಾತನಾಡಿ
ಡಾ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ನು ಆರಂಭಿಸಿ ಅದರ ಮೂಲಕ ಮಹಿಳೆಯರು, ಯುವಕರು, ರೈತರು ಸೇರಿದಂತೆ ಸರ್ವರ ಏಳಿಗೆಗಾಗಿ ಹತ್ತಾರು ಕಾರ್ಯಕ್ರಮಗಳನ್ನು ರೂಪಿಸಿ ಪ್ರಾಮಾಣಿಕವಾಗಿ ಅನುಷ್ಠಾನ ಮಾಡುವ ಮೂಲಕ ಪ್ರತಿಯೊಬ್ಬರು ತಮ್ಮ ಬದುಕನ್ನು ಉತ್ತಮ ರೀತಿಯಲ್ಲಿ ಕಟ್ಟಿಕೊಳ್ಳಬೇಕು ಆ ಮೂಲಕ ಸಮಾಜದ ಮುಖ್ಯ ವಾಹಿನಿಯಲ್ಲಿ ಎಲ್ಲರೂ ಸಮಾನ ರೀತಿಯಲ್ಲಿ ಜೀವನ ನಡೆಸುವಂತೆ ಮಾಡಲಾಗುತ್ತಿದೆ ಎಂದರು.

ಈ ಮಧ್ಯವರ್ಜನ ಶಿಬಿರದಲ್ಲಿ 58 ಜನರು ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಪಟ್ಟಣದ
ಶ್ರೀದ್ವಯ ಸಿದ್ಧಾಂತ ಪೀಠದ ಶ್ರೀಮದ್ ಉಭಯವೇದಾಂತಿ ಧನುರ್ದಾಸ ರಾಮಾನುಜ ಜೀಯರ್ ಸ್ವಾಮೀಜಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮುರಳಿಧರ, ತಹಶೀಲ್ದಾರ್ ಎಸ್.ಎನ್.ನರಗುಂದ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರುಗಳಾದ
ಸಿ.ಕೆ.ಬಾಲಮನೋಹರ, ಶಕುಂತಲಾ,
ಎಸ್.ಬಿ.ಶೇಖರ್, ಸಂಪತ್ ಕುಮಾರ್, ಗ್ರಾ.ಪಂ. ಅಧ್ಯಕ್ಷೆ
ಎಸ್.ಆರ್.ಮಂಜುಳಾ ರಮೇಶ್, ಮಾಜಿ ಅಧ್ಯಕ್ಷ ಎ.ಟಿ.ಗೋಪಾಲ್, ಮಧ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರಾಜೇಂದ್ರ ಪ್ರಸಾದ್, ಉಪಾಧ್ಯಕ್ಷರಾದ ಎಂ.ಬಿ.ಲೋಕನಾಥ್, ರಾಣಿ, ಕೋಶಾಧಿಕಾರಿ ಗೌತಮ್, ತಾಲ್ಲೂಕು ಯೋಜನಾಧಿಕಾರಿ ಉಮೇಶ್ ಪೂಜಾರಿ, ಯೋಜನೆಯ ನಾಗರಾಜು, ವಿದ್ಯಾಧರ, ರಮೇಶ್, ವೆಂಕಟೇಶ್, ನಂದಕುಮಾರ, ದರಣಪ್ಪಗೌಡ, ಸುಜಾತ, ರೇಖಾ, ಬಸವರಾಜು, ಗೋವಿಂದ, ದೀಪಾ, ಶಿಲ್ಪ, ಉಮೇಶ್, ಕೀರ್ತಿ ಸೇರಿದಂತೆ ಹಲವರು ಇದ್ದರು.

About The Author


Discover more from JANADHWANI NEWS

Subscribe to get the latest posts sent to your email.

Leave a Reply

Discover more from JANADHWANI NEWS

Subscribe now to keep reading and get access to the full archive.

Continue reading