ಚಳ್ಳಕೆರೆ ಜು.18
ಜಿಲ್ಲಾ ಪೊಲೀಸ್ ಎಸ್‌ಪಿ ರಂಜಿತ್‌ಕುಮಾರ್ ಬಂಡಾರು ಇವರ ಮಾರ್ಗದರ್ಶನದಲ್ಲಿ ಚಳ್ಳಕೆರೆ ನಗರದಲ್ಲಿ ನಮ್ಮ ನಡೆ, ಜಾಗೃತಿಯ ಕಡೆ’ ಕಾರ್ಯಕ್ರಮ ಹಾಗೂ ಸಾರ್ವಜನಿಕ ಸಂಪರ್ಕ ಸಭೆಗಳನ್ನು ಜುಲೈ 23ರಿಂದ25 ರವರೆಗೆ ಮೂರು ದಿನಗಳ ಕಾಲ ಶ್ರೀರಾಘವೇಂದ್ರ ಕಲ್ಯಾಣ ಮಂಡಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಡಿವೈಎಸ್ಪಿ ರಾಜಣ್ಣ ತಿಳಿಸಿದ್ದಾರೆ.
23 ಮತ್ತು 24 ಜಾಗೃತಿ ಕಾರ‌್ಯಕ್ರಮ .ವಸ್ತು ಪ್ರದರ್ಶನ ಹಾಗೂ 25 ರಂದು ಸಾರ್ವಜನಿಕ ಸಂಪರ್ಕ ಸಭೆಯನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮದ ಮೂಲಕ ಸೈಬರ್ ಅಪರಾಧ, ಮಾದಕ ವಸ್ತು, ಸಂಚಾರ ಸುರಕ್ಷತೆ, ಬಾಲ್ಯವಿವಾಹ, ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಜಾಗೃತಿ, ಆಯುಧ ಪ್ರದರ್ಶನ, ಪ್ರಾತ್ಯಕ್ಷಿಕೆ ಹಾಗೂ ಸಾರ್ವಜನಿಕ ಸಂಪರ್ಕ ಸಭೆಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುವುದು.
ತಾಲೂಕಿನ ಎಲ್ಲಾ ಶಾಲಾ ಕಾಲೇಜಿನ ವಿದ್ಯಾರ್ಥಿಗಳು.ವಿವಧ ವಾಹನ ಚಾಲಕರು.ವಕೀಲರು. ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಡಿವೈಎಸ್ಪಿ ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.