ನಾಯಕನಹಟ್ಟಿ ಹೋಬಳಿಯ ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಬ್ಬೇನಹಳ್ಳಿ ಗ್ರಾಮದ ವಿದ್ಯಾರ್ಥಿ ಆರ್. ತಿಲಕ್ ನಾಯಕ ಸೈನಿಕ ಶಾಲೆ ಮತ್ತು ನವೋದಯ ಶಾಲೆಗಳ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.
ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಕೆ.ಸಿ. ರಾಧ ಹಾಗೂ ಎ.ಪಿ. ರೇವಣ್ಣ ಅವರ ಪುತ್ರನಾದ ತಿಲಕ್ ನಾಯಕ, ಪ್ರಸ್ತುತ ಶ್ರೀ ಸ್ವಾಮಿ ವಿವೇಕಾನಂದ ಹಿರೇಹಳ್ಳಿ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.
ವಿದ್ಯಾರ್ಥಿಯ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಸಂತೋಷ ವ್ಯಕ್ತಪಡಿಸಿದೆ. ಇದೇ ಸಂದರ್ಭದಲ್ಲಿ ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಪಾಪಮ್ಮ, ಉಪಾಧ್ಯಕ್ಷೆ ಶ್ರೀಮತಿ ಅನಿತಮ್ಮ ಹಾಗೂ ಸದಸ್ಯರು ವಿದ್ಯಾರ್ಥಿಯನ್ನು ಅಭಿನಂದಿಸಿ, ಭವಿಷ್ಯದಲ್ಲಿ ಇನ್ನಷ್ಟು ಸಾಧನೆ ಮಾಡುವಂತೆ ಹಾರೈಸಿದರು.
ಗ್ರಾಮದ ಮಟ್ಟದಲ್ಲಿ ಈ ಸಾಧನೆ ಹೆಮ್ಮೆ ತರುವಂತದ್ದಾಗಿದ್ದು, ಸಾರ್ವಜನಿಕರಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ.