ಚಳ್ಳಕೆರೆ ನ.21. ಗ್ರಾಮೀಣ ಸಮುದಾಯದಲ್ಲಿ ಸುರಕ್ಷಿತ ನೈರ್ಮಲ್ಯ, ಶುಚಿತ್ವ ಕುರಿತು ಜಾಗೃತಿ ಮೂಡಿಸಿ ಶೌಚಾಲಯಗಳನ್ನು ನಿರಂತರವಾಗಿ ಬಳಸುವಂತೆ ಪ್ರೇರೇಪಿಸಲಾಗುವುದು ಎಂದು ಪಿಡಿಒ ಹೊನ್ನೂರಪ್ಪ ತಿಳಿಸಿದರು.
ತಾಲೂಕಿನ ಘಟಪರ್ತಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ವಿಶ್ವ ಶೌಚಾಲಯ ದಿನಾಚರಣೆ ಅಂಗವಾಗಿ ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು. ಶೌಚಾಲಯ-ಆನಂದದ ಜೀವನ ಎಂಬ ಘೋಷ ವಾಕ್ಯದೊಂದಿಗೆ ವಿಶೇಷ ಆಂದೋಲನ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುವುದು. ಈ ದಿನಾಚರಣೆಯು ಬಹಿರ್ದೆಸೆ ಮುಕ್ತ ಸ್ಥಿತಿಯ ಸ್ಥಾನಮಾನವನ್ನು ಉಳಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ತಿಳಿಸಿದ ಅವರು, ಗ್ರಾಮ ಪಂಚಾಯಿತಿ ಹಂತದಲ್ಲಿ ಸ್ವಚ್ಛ, ಸುಂದರ ವೈಯಕ್ತಿಕ ಗೃಹ ಶೌಚಾಲಯ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ನಮ್ಮ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಎರಡು ಶೌಚಾಲಯಗಳು ಸುಂದರವಾಗಿರುವ ಎರಡು ಶೌಚಾಲಯಗಳು ಪೈಪೋಟಿಯಲ್ಲಿದ್ದು ಎರಡನ್ನೂ ಜಿಲ್ಲಾ ಮಟ್ಟಕ್ಕೆ ಆಯ್ಕೆಗೆ ಕಳಿಸಿಕೊಡಲಾಗುವುದು.
ಸ್ಪರ್ಧೆಯಲ್ಲಿ ವಿಜೇರಿಗೆ ಪುರಸ್ಕಾರಗಳನ್ನು ನೀಡಿ ಗೌರವಿಸಲಾಗುವುದು.
ಶಾಲೆ ಅಂಗನವಾಡಿ .ಸಾರ್ವಜನಿಕಹಾಗೂ ವೈಯುಕ್ತಿಕ ಶೌಚಾಲಯಗಳನ್ನು ಬಳಕೆ ಮಾಡುವಂತೆ ಅರಿವು ಮೂಡಿಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಂಗನವಾಡಿ.ಆಶಾ ಕಾರ್ಯಕರ್ತೆಯರು ಗ್ರಾಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.











